Skip to content

ಜನ್ನ ಕನ್ನಡದ ಪ್ರಸಿದ್ಧ ಜೈನಕವಿ. ಈತ ೧೨ನೆಯ ಶತಮಾನದ ಉತ್ತರಾರ್ಧ ಮತ್ತು ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ.
ಹಳೆಯಬೀಡು ಪ್ರಾಂತದವನಾದ ಜನ್ನನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ. ತಾಯಿ ಗಂಗಾದೇವಿ. ಜನ್ನನ ಹೆಂಡತಿ ಲಕುಮಾದೇವಿ. ಜನ್ನನ ಧರ್ಮಗುರು ರಾಮಚಂದ್ರ ದೇವ ಮುನಿ, ಉಪಾಧ್ಯಾಯ ಇಮ್ಮಡಿ ನಾಗವರ್ಮ. ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦ ತಾಳೆಗರಿಗಳ ಪ್ರತಿಗಳನ್ನು ಬರೆಸಿ, ಉದಾರ ಸಂಭಾವನೆಯೊAದಿಗೆ ವಿದ್ಯಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರು ಮಕಾಶಿಗಳಾಗಿದ್ದರು. ಜೀವಿಸಿ ಧರ್ಮಾಚರಣೆಯನ್ನು ಮರೆಯದೆ ಧರ್ಮದ, ನೀತಿಯ ನೆಲಗಟ್ಟನ್ನು ಮೀರದೇ ಇಹಲೋಕದ ಸುಖವನ್ನು ಪರಲೋಕ ಗತಿಯ ಆಶಯವನ್ನೂ ಸಾಧಿಸಿಕೊಳ್ಳಲು ಶ್ರಮಿಸಿದ ಶ್ರೇಷ್ಠವರ್ಗದ ಸಾಧಕ.
ಜನ್ನ ಹೊಯ್ಸಳ ಬಲ್ಲಾಳನಿಂದ ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದು, ಅನಂತರ ನರಸಿಂಹನಲ್ಲಿ ದಂಡಾಧಿಪತಿಯೂ ಮಂತ್ರಿಯೂ ಆಗಿದ್ದ.
ಜನ್ನ “ಅನುಭವಮುಕುರ” ವೆಂಬ ಕಾಮಶಾಸ್ತç ಸಂಬAಧವಾದ ಕೃತಿಯನ್ನೂ ಯಶೋಧರ ಚರಿತೆ, ಅನಂತನಾಥಪುರಾಣ ಎಂಬ ಎರಡು ಕಾವ್ಯಗಳನ್ನೂ ಬರೆದಿದ್ದಾನೆ. ಕೆಲವು ಶಾಸನಗಳೂ ಈತನಿಂದ ರಚಿತವಾಗಿವೆ.
ಯಶೋಧರಚರಿತೆ, ಅನಂತನಾಥ ಪುರಾಣ ಎರಡೂ ಧಾರ್ಮಿಕ ಕೃತಿಗಳು. ಯಶೋಧರಚರಿತೆ ಬಹುಸುಂದರವಾದ ಪುಟ್ಟಕಾವ್ಯ.
ಮನುಷ್ಯ ಮನಸ್ಸಿನ ಸಂಕೀರ್ಣತೆ ಮತ್ತು ‘ಹಿಂಸೆ’ ಯ ವ್ಯಾಖ್ಯಾನ, ನೇರ ಹಿಂಸೆ ಮತ್ತು ಭಾವಹಿಂಸೆ (ಸಂಕಲ್ಪ ಹಿಂಸೆ)- ಇವುಗಳ ಕುರಿತಾದ ಚರ್ಚೆ, ಇದರ ಜೊತೆಗೆ ಭವಾವಳಿಗಳ ಮೂಲಕ ‘ಹಿಂಸೆ’ಯ ಪರಿಣಾಮದ ಬಗ್ಗೆ ತಿಳಿ ಹೇಳುವ ಈ ಕಾವ್ಯ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮಹಾನ್ ಕೃತಿ ಎಂಬುದಾಗಿ ದಾಖಲಾಗುತ್ತದೆ. ಅನಂತನಾಥಪುರಾಣ ೧೪ನೆಯ ತೀರ್ಥಂಕರನಾದ ಅನಂತನಾಥನ ಕತೆಯನ್ನು ಬಣ್ಣಿಸುವ ತೀರ್ಥಕರ ಭವಾವಳಿಯನ್ನೂ ಪಂಚಕಲ್ಯಾಣಗಳನ್ನೂ ವಿಸ್ತಾರವಾಗಿ ವರ್ಣಿಸಿದ್ದಾನೆ, ಜನ್ನ ಕೊನೆಯ ಭಾಗದಲ್ಲಿ ವಸುಷೇಣ ಚಂಡಶಾಸನರ ಕಥೆಯನ್ನು ರಸಮಯವಾಗಿ ಹೇಳಿದ್ದಾನೆ. ಜನ್ನ ತುಂಬುಜೀವನವನ್ನು ಯಶೋಧರ ಚರಿತೆಯಲ್ಲಿಯೂ’ಅನಂತನಾಥ ಪುರಾಣ’ದಲ್ಲಿಯೂ ಜನ್ನನು ಪ್ರಣಯವನ್ನೂ ತದಾಭಾಸವನ್ನೂ ನೈಪುಣ್ಯದಿಂದ ನಿರೂಪಿಸಿದ್ದಾನೆ.
೧೪ ಆಶ್ವಾಸಗಳ ಪ್ರೌಢ ಚಂಪೂ ಕಾವ್ಯ. ಇದಕ್ಕೆ ಮುಖ್ಯವಾದ ಆಕರ ಗುಣಭದ್ರಾಚಾರ್ಯರು ಸಂಸ್ಕೃತದಲ್ಲಿ ರಚಿಸಿರುವ ಉತ್ತರಪುರಾಣ. ಅಲ್ಲಿ ಕಿರಿದಾಗಿ ಬರುವ ಅನಂತನಾಥನ ಕತೆಯನ್ನು ಜನ್ನ ಎಳೆದು ಹಿಗ್ಗಸಿ ೧೪ ಆಶ್ವಾಸಗಳಷ್ಟು ದೊಡ್ಡದು ಮಾಡಿದ್ದಾನೆ. ಇದರಲ್ಲಿನ ಚಂಡಶಾಸನನ ಉಪಾಖ್ಯಾನ ಒಂದು ಹೃದಯಂಗಮವಾದ ಭಾಗ. ಉತ್ತರ ಪುರಾಣದಲ್ಲಿ ಬಿಂದುರೂಪವಾಗಿ ಬರುವ ಕತೆಯನ್ನು ಇಲ್ಲಿ ಜನ್ನ ಸೊಗಸಾಗಿ ವಿಸ್ತರಿಸಿದ್ದಾನೆ. ಯಶೋಧರಚರಿತೆಯಲ್ಲಿ ಹೆಣ್ಣಿನ ನಿಷಿದ್ಧ ಕಾಮ ಚಿತ್ರಿತವಾಗಿದ್ದರೆ ಚಂಡಶಾಸನ ವೃತ್ತಾಂತದಲ್ಲಿ ಗಂಡಿನ ದುರಂತ ವ್ಯಾಮೋಹ ನಿರೂಪಿತವಾಗಿದೆ. ಸುಮಾರು ೮೦ ಪದಗಳಷ್ಟು ಚಿಕ್ಕದಾದರೂ ಈ ಉಪಾಖ್ಯಾನ ಸಹೃದಯರ ಚಿತ್ರದ ಮೇಲೆ ಅಳಿಸಲಾಗದ ಮುದ್ರೆಯೊತ್ತುತ್ತದೆ.
ಯಶೋಧರಚರಿತೆ ಹಾಗೂ ಅನಂತನಾಥಪುರಾಣದ ಚಂಡಶಾಸನ ಕಥೆ ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಸ್ಥಾನ ಪಡೆಯುತ್ತವೆ. ಸಂಪ್ರದಾಯಬದ್ಧವೂ ಚಿರಪರಿಚಿತವೂ ಆದ ವಸ್ತುವನ್ನು ಬಿಟ್ಟು, ಕವಿ ವಿಷಮಪ್ರಣಯದ ಎರಡು ದಿಕ್ಕುಗಳನ್ನು ಚಿತ್ರಿಸಿ ಬದುಕಿನ ವಾಸ್ತವಿಕತೆಗೆ ಕನ್ನಡಿ ಹಿಡಿದಿದ್ದಾನೆ. ವಿಮರ್ಶಕರೊಬ್ಬರು ಹೇಳುವಂತೆ ಅದಮ್ಯವಾದ ಕಾಮದ, ಧರ್ಮವಿರುದ್ದ ಪ್ರಣಯದ ಮುಖ ಪುರಷ ಮುಖಗಳನ್ನು ಉಜ್ವಲವಾಗಿ ಕ್ರಾಂತಿಕಾರಕ ರೀತಿಯಲ್ಲಿ ಚಿತ್ರಿಸಿದ ಜನ್ನ ಕನ್ನಡ ಸಾಹಿತ್ಯಕ್ಕೆ ಸ್ವಂತ ಕಾಣಿಕೆ ಸಲ್ಲಿಸಿದ್ದಾನೆ. ಕನ್ನಡ ಸಾಹಿತ್ಯಕ್ಕೆ ಮಾತ್ರವಲ್ಲ, ಜಾಗತಿಕ ಸಾಹಿತ್ಯಕ್ಕೂ ಬೆಲೆಯುಳ್ಳ ಕಾಣಿಕೆ ಸಲ್ಲಿಸಿದ್ದಾನೆ. ಮಹಾಕಾವ್ಯದ ಔನ್ನತ್ಯ, ಭವ್ಯತೆಗಳು ಆಂಶಿಕವಾಗಿಯಾದರೂ ಅವನ ಎರಡು ಕಿರುಗಬ್ಬಗಳಲ್ಲಿ, ತಲೆದೋರಿವೆ.
ಜನ್ನನು ಚನ್ನರಾಯಪಟ್ಟಣದ ತಾಮ್ರಶಾಸನವನ್ನು ಕ್ರಿ.ಶ. ೧೧೯೧ರಲ್ಲಿಯೂ ತರೀಕೆರೆಯ ಶಾಸನವನ್ನು ಕ್ರಿ.ಶ. ೧೧೯೭ರಲ್ಲಿಯೂ ಬರೆದನು. ಕ್ರಿ.ಶ. ೧೨೦೯ರಲ್ಲಿ ‘ಯಶೋಧರ ಚರಿತೆ’ಯನ್ನು, ಕ್ರಿ.ಶ. ೧೨೩೦ರಲ್ಲಿ ಅನಂತನಾಥ ಪುರಾಣ'ವನ್ನೂ ರಚಿಸಿದನು. ಈ ಕವಿಯ ಸಾಹಿತ್ಯ ಸೇವೆ ಕ್ರಿ.ಶ. ೧೧೯೧ ರಿಂದ ಕ್ರಿ.ಶ. ೧೨೩೦ರವರಗೆ ನಲವತ್ತು ವರ್ಷಗಳ ಕಾಲ ನಡೆಯಿತು. ಜನ್ನ ‘ಇತ್ತಕೈಯಲ್ಲದೇ ಒಡ್ಡಿದ ಕೈಯಲ್ಲದ ಪೆಂಪು' ಎಂದು ಹೇಳಿಕೊಂಡಿರುವುದರಿAದ ಇವನು ಶ್ರೀಮಂತನೂ ಧಾರಾಳಿಯೂ ಆಗಿದ್ದನೆಂದು ತಿಳಿಯಬಹುದು. ಇವನು ದ್ವಾರಸಮುದ್ರದ ಪಾರ್ಶ್ವಜಿನನ ಮಂದಿರದ ದ್ವಾರವನ್ನು ಮಾಡಿಸಿಕೊಟ್ಟನು. ಅನಂತನಾಥ ಸ್ವಾಮಿಗೆ ಒಂದು ಬಸದಿಯನ್ನೇ ಕಟ್ಟಿಸಿದನು. ಇವನು ಹಿಂದಿನ ಕವಿಗಳಲ್ಲಿ ಪಂಪ, ಪೊನ್ನ, ರನ್ನ ನಾಗಚಂದ್ರ ಮೊದಲಾದವರನ್ನು ಹೊಗಳಿದ್ದಾನೆ. ಮಧುರಕವಿಯು ಇವನನ್ನು ನೇಮಿಚಂದ್ರನ ಜತೆಗೆ ಸೇರಿಸಿ ನೇಮಿ ಜನ್ನಮರಿರ್ವರೆ ಕರ್ಣಾಟಕೃತಿಗೆ ಸೀಮಾಪುರುಷರ್' ಎಂದು ಕೊಂಡಾಡಿದ್ದಾನೆ. ಪ್ರಶಸ್ತಿ, ಪುರಸ್ಕಾರ, ಬಿರುದು: ಇವನುನಾಳ್ಪçಭು’ವೂ ಆಗಿದ್ದನಂತೆ! ಜಿನೇಂದ್ರ ನಿಲಯ ನಿರ್ಮಾಣಧನಂ' ಎಂದು ಹೇಳಿಕೊಂಡಿರುವ ಜನ್ನನು ಶ್ರೀಮಂತನಾಗಿದ್ದನೆAದು ತಿಳಿಯಬೇಕು. ಇವನಿಗೆ ‘ಕವಿಚಕ್ರವರ್ತಿ,’ ‘ಕವಿ ಭಾಳನೇತ್ರಂ',ಉದ್ದಂಡಕವಿ’ ಅಸಹಾಯ ಸುಕವಿ',ಸಾಹಿತ್ಯ ರತ್ನಾಕರಂ’ ಎಂಬ ಬಿರುದುಗಳಿವೆ.

Visit this link for an article About “Janna” in English

error: Jain Heritage Centres - Celebrating Jain Heritage.....Globally!